ಬೆಂಗಳೂರು, ನ.06(Daijiworld News/SS): ಹೆಚ್ ಡಿ ಕೆ ಸರ್ಕಾರ ಪತನವಾಗಲು ಸಿದ್ದರಾಮಯ್ಯ ಕಾರಣ. ಸರ್ಕಾರ ಪತನವಾದ ಬಳಿಕ ಒಂದೊಂದೇ ಅಂಶಗಳು ಹೊರಬರುತ್ತಿವೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಹೆಚ್ ಡಿ ದೇವೇಗೌಡ, ಬಿಜೆಪಿ ಜೊತೆ ಜೆಡಿಎಸ್ ಇದ್ದೇ ಇರುತ್ತದೆ. ನಿಮ್ಮ ಸರ್ಕಾರ ಬೀಳಲು ಅವಕಾಶ ನೀಡುವುದಿಲ್ಲ. 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಏನೇ ಬಂದರೂ ಸಹ ಬಿಜೆಪಿ ಸರ್ಕಾರದ ಜೊತೆ ಜೆಡಿಎಸ್ ಇರಲಿದೆ. ಬಿಜೆಪಿ ಸರ್ಕಾರ ಬೀಳುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಮುಂದಿನ ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಒಳಒಪ್ಪಂದದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ, ಒಳ ಒಪ್ಪಂದದ ನಡೆಯುವುದು ಬೇರೆ ಪ್ರಶ್ನೆ. ಬಿಜೆಪಿ ಸರ್ಕಾರ ಬೀಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಅವರು ಬಿಎಸ್ ಯಡಿಯೂರಪ್ಪ ಸರ್ಕಾರದ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಈ ರೀತಿಯಾಗಿ ಪ್ರತಿಕ್ರಿಯೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.