ಬೆಂಗಳೂರು, ನ.06(Daijiworld News/SS): ಪ್ರಸ್ತುತ ರಾಜ್ಯದಲ್ಲಿ ಭಯ ಹುಟ್ಟಿಸುವ ವಾತಾವರಣ ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿಲ್ಲ. ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಸುದ್ದಿ ಭಿತ್ತರಿಸಲಾಗಿದೆ. ತಮಗೆ ಬಿಜೆಪಿ ಸರ್ಕಾರದ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ. ಯಡಿಯೂರಪ್ಪ ಸರ್ಕಾರಕ್ಕೆ ತಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರಿಗೆ ಆಗುತ್ತಿರುವ ಕಿರುಕುಳ ನಿಲ್ಲಬೇಕು. ಇಲ್ಲದಿದ್ದರೆ ಸಿಎಂ ಮನೆ ಎದುರು ನಾನೇ ನ.15ರಂದು ಧರಣಿ ಮಾಡುತ್ತೇನೆ. ರಾಜ್ಯದಲ್ಲಿ ಭಯ ಹುಟ್ಟಿಸುವ ವಾತಾವರಣ ಇದೆ ಎಂದು ಆರೋಪಿಸಿದರು.
ಕೆಲ ಮಾಧ್ಯಮಗಳಲ್ಲಿ ದೇವೇಗೌಡರು ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ ಎಂಬ ವರದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿಲ್ಲ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಸುದ್ದಿ ಬಿತ್ತರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.