ಬೆಂಗಳೂರು, ನ. 07 (DaijiworldNews/SM): ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ಆರೋಪಿಗಳನ್ನು ಬಂಧಿಸದ ಹಿನ್ನೆಲೆ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ನಿರಂತರವಾಗಿ ಮುಂದುವರೆದಿದ್ದು, ನವಂಬರ್ 8ರ ಶುಕ್ರವಾರದಂದು ಒಪಿಡಿ ಬಂದ್ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ.
ಮಿಂಟೊ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಘಟನೆಯನ್ನು ಖಂಡಿಸಿ ಕಿರಿಯ ವೈದ್ಯರು ನವಂಬರ್ 1ರಿಂದಲೇ ನಿರಂತರ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.
ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಬೇಕೆನ್ನುವುದು ಪ್ರತಿಭಟನಾಕಾರ ಆಗ್ರಹ. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಶುಕ್ರವಾರದಂದು ಒಪಿಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ವೈದ್ಯರ ಸಂಘಟನೆ ನಿರ್ಧರಿಸಿದೆ.