ಲಖನೌ, ನ.08(Daijiworld News/SS): ರಾಮ ಜನ್ಮ ಭೂಮಿ ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಇನ್ನು ಕೆಲವೇ ದಿನಗಳಲ್ಲಿ ತೀರ್ಪು ನೀಡಲಿದೆ. ಈ ಹಿನ್ನೆಲೆ ಹಲವು ರಾಜ್ಯಗಳ ಸೂಕ್ಷ್ಮ ಸ್ಥಳಗಳಲ್ಲಿ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಭದ್ರತೆಯನ್ನು ಕಲ್ಪಿಸಲು ಮತ್ತು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡದೆ.
ಅಯೋಧ್ಯೆ ವಿಷಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಯಾವುದೇ ದಿನ ಹೊರಬೀಳಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸೂಚಿಸಿದ್ದಾರೆ ಎನ್ನಲಾಗಿದೆ.
‘ಶಾಂತಿಯನ್ನು ಭಂಗಗೊಳಿಸಲು ಯತ್ನಿಸುವ ಸಮಾಜ ಘಾತುಕ ಶಕ್ತಿಗ ವಿರುದ್ಧ ತ್ವರಿತವಾಗಿ ಕ್ರಮ ತೆಗೆದುಕೊಳ್ಳಲು ಹಿಂದೆ-ಮುಂದೆ ನೋಡಬೇಡಿ’ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.