ನವದೆಹಲಿ, ನ.08(Daijiworld News/SS): ಸುಪ್ರೀಂ ಕೋರ್ಟ್'ನಲ್ಲಿ ನ.09ರಂದು ಬಹು ನಿರೀಕ್ಷಿತ ಅಯೋಧ್ಯೆ ತೀರ್ಪು ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶನಿವಾರ ಬೆಳಗ್ಗೆ 10.30 ಕ್ಕೆ ತೀರ್ಪು ಪ್ರಕಟಿಸಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಅಯೋಧ್ಯೆ ಸೇರಿದಂತೆ ದೇಶಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪನ್ನು ಮುಂದಿನ ವಾರದಲ್ಲಿ ಪ್ರಕಟಿಸಲಿದೆ ಎಂದು ಭಾವಿಸಲಾಗಿತ್ತಾದರೂ, ನಾಳೆಯೇ ತೀರ್ಪು ಪ್ರಕಟಿಸುವುದನ್ನು ಸ್ಪಷ್ಟಪಡಿಸಿದೆ.