ಬೆಂಗಳೂರು, ನ.09(Daijiworld News/SS): ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಸಾಮಾಜಿಕ ಜಾಲತಾಣ ಬಳಕೆದಾರರ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಫೇಸ್ ಬುಕ್, ಇನ್'ಸ್ಟಾಗ್ರಾಂ ವಾಟ್ಸಾಪ್ ಮತ್ತು ಬೇರೆ ಬೇರೆ ಜಾಲಾತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶ, ಪೋಸ್ಟ್ ಹಾಗೂ ಕಮೆಂಟ್ ಮಾಡಬಾರದು. ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಆಕ್ಷೇಪಾರ್ಹ ಫೋಸ್ಟ್ ಹಾಕಬಾರದು ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಯಾವುದೇ ರಾಜಕೀಯ ಮತ್ತು ಧಾರ್ಮಿಕ ವಿಷಯದ ಬಗ್ಗೆ ನಿಂದನೆಯ ಸಂದೇಶಗಳನ್ನು ಕಳುಹಿಸುವುದು ರವಾನಿಸುವುದು ಅಪರಾಧವಾಗಿದ್ದು ಅದನ್ನು ಉಲ್ಲಂಘಿಸಿದರೆ ಕಠಿಣಕ್ರಮ ಜರುಗಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಸದಸ್ಯರು ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡುವು ಸಂದೇಶಗಳನ್ನು ಬೇರೆಯವರಿಗೆ ಕಳುಹಿಸಬಾರದು. ಜೊತೆಗೆ ಬೇರೆಯವರಿಂದ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ವಿವಿಧ ಗ್ರೂಪ್'ಗಳಿಗೆ ರವಾನಿಸುವುದು ಕಂಡುಬಂದಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್'ಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಮಾತ್ರವಲ್ಲ, ಕಾನೂನು ಮತ್ತು ನಿಯಮಗಳ ಬಗ್ಗೆ ನಾಗರಿಕರು ಜಾಗರೂಕರಾಗಿ ಇರಬೇಕು . ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದ್ದಾರೆ.