ನವದೆಹಲಿ, ನ 09 (Daijiworld News/MSP): ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ಪಂಚನ್ಯಾಯಮೂರ್ತಿಗಳ ಪೀಠ ರಾಮಜನ್ಮ ಭೂಮಿ- ಬಾಬಾರಿ ಮಸೀದಿಯ ಜಾಗದ ವಿವಾದಕ್ಕೆ ಸಂಬಂಧಿಸಿದ ಶತಮಾನದ ವಿವಾದಕ್ಕೆ ಅಂತಿಮವಾಗಿ ತೆರೆ ಎಳೆದಿದ್ದಾರೆ. ಅರ್ಜಿದಾರ ರಾಮಲಲ್ಲಾ ವಾದ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ . ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹೊಣೆ ಸರ್ಕಾರದ್ದು ಎನ್ನುವ ತೀರ್ಪು ನೀಡಿದೆ.
ಅಯೋಧ್ಯೆಯಲ್ಲಿ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಹಾಗೂ ರಾಮ್ ಲಲ್ಲಾ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಅಲಹಬಾದ್ ಹೈಕೋರ್ಟ್ ಆದೇಶಿಸಿತ್ತು. ಆದರೆ 2010ರ ಅಲಹಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರ್ತೀಂ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು ಇದರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸುಮಾರು 40 ದಿನಗಳ ಕಾಲ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಅಂತಿಮವಾಗಿ ತೀರ್ಪು ನ.9 ರ ತೀರ್ಪು ಹೊರಬಿದ್ದಿದೆ.