ಮುಂಬೈ, ನ 10 (DaijiworldNews/SM): ಮಹಾರಾಷ್ಟ್ರದಲ್ಲಿ ಸರಕಾರ ರಚನೆ ವಿಚಾರಕ್ಕೆ ಯಾವುದೇ ಪಕ್ಷಗಳು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನಿಸಿದ್ದರು. ಆದರೆ, ಬಿಜೆಪಿ ಇದಕ್ಕೆ ನಿರಾಕರಿಸಿದೆ. ಬಹುಮತವಿಲ್ಲದ ಹಿನ್ನೆಲೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಮುಖಂಡರು, ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟಕ್ಕೆ ಮಹಾರಾಷ್ಟ್ರ ಜನತೆ ಬೆಂಬಲ ನೀಡಿದೆ. ಹೀಗಾಗಿ ಜನರ ತೀರ್ಪಿಗನುಗುಣವಾಗಿ ನಾವು ನಡೆದುಕೊಳ್ಳಬೇಕಾಗುತ್ತದೆ. ಜನರ ತೀರ್ಪನ್ನು ಉಲ್ಲಂಘಿಸಿ ಸರಕಾರ ರಚನೆ ಅಸಾಧ್ಯದ ಮಾತಾಗಿದೆ. ಶಿವಸೇನೆ ಇಲ್ಲದೇ ನಾವು ಏಕಾಂಗಿಯಾಗಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಇನ್ನು ಶಿವಸೇನೆ ತನ್ನ ಉದ್ಧಟತನದಿಂದ ಜನತೆಯ ಆದೇಶವನ್ನು ಉಲ್ಲಂಘಿಸುತ್ತಿದೆ. ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಅಪವಿತ್ರ ಮೈತ್ರಿ ಮೂಲಕ ಸರ್ಕಾರ ರಚನೆಗೆ ತಂತ್ರಗಾರಿಕೆಯನ್ನು ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ನಡುವೆ ಹಂಗಾಮಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಎನೋ ಸರಕಾರ ರಚನೆಗೆ ಸಿದ್ದವಾಗಿದೆ. ಆದರೆ, ಶಿವಸೇನೆ ಬಿಜೆಪಿಗೆ ಬೆಂಬಲ ನೀಡದ ಹಿನ್ನೆಲೆಯಲ್ಲಿ ಸರಕಾರ ರಚನೆ ಕಷ್ಟ ಸಾಧ್ಯವಾಗಿದೆ.