ಬೆಂಗಳೂರು, ನ.12(Daijiworld News/SS): ಮಂಗಳೂರು, ದಾವಣಗೆರೆ ಮಹಾನಗರ ಪಾಲಿಕೆಗಳ ಸಹಿತ ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದು ಮತದಾನ ನಡೆಯಲಿದೆ.
ರಾಜ್ಯ ಚುನಾವಣ ಆಯೋಗ ಮತದಾನಕ್ಕೆ ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ ಮತ್ತು 3 ಪಟ್ಟಣ ಪಂಚಾಯತ್'ಗಳ 418 ವಾರ್ಡ್ಗಳ ಪೈಕಿ 409 ವಾರ್ಡ್'ಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ವರೆಗೆ 1,388 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ಸ್ಥಳೀಯ ಸಂಸ್ಥೆಗಳ 1388 ಮತಗಟ್ಟೆಗಳಲ್ಲಿ, 13, 04,614 ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಈ ಚುನಾವಣೆಗೆ ನ.12 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ನ.13 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ನಂತರ ನ.14 ರಂದು ಆಯಾ ತಾಲೂಕು ಕೇಂದ್ರ ಸ್ಥಳದಲ್ಲಿ ಮತಗಳ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.