ನವದೆಹಲಿ,ಅ.14 (DaijiworldNews/AK): ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸ್ಪಷ್ಟ ತೀರ್ಮಾನವಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಇಂಡಿ ಒಕ್ಕೂಟ ನಿರ್ಧಾರ ಕೈಗೊಂಡಿದೆ.

ಮುಂಬರುವ ನವರಾತ್ರಿ ಹಬ್ಬ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಬೃಹತ್ ಜನ ಆಂದೋಲನಕ್ಕೆ ವಿಪಕ್ಷಗಳ ಮೈತ್ರಿಕೂಟ ರಣತಂತ್ರ ರೂಪಿಸಿದೆ.
ಮಂಗಳವಾರ ರಾಹುಲ್ ನಿವಾಸದಲ್ಲಿ ನಡೆದ ಇಂಡಿ ಒಕ್ಕೂಟದ ಪ್ರಮುಖ ಸಂಸದರು ಮತ್ತು ಹಿರಿಯ ನಾಯಕರ ಮಹತ್ವದ ಸಭೆಯಲ್ಲಿ ಹೋರಾಟದ ಮುಂದಿನ ಹಂತಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ, ಒಗ್ಗಟ್ಟಾಗಿಯೇ ಹೋರಾಟ ಮುಂದುವರಿಸುತ್ತೇವೆ ಎಂಬ ಸ್ಪಷ್ಟ ಸಂದೇಶವನ್ನು ನಾಯಕರು ಸಾರಿದ್ದಾರೆ. ಸಂಬಂಧ ತಾನು ಸಲ್ಲಿಸಿರುವ ಅರ್ಜಿಯ ಮೇಲಿನ ಸುಪ್ರೀಂ ಕೋರ್ಟ್ನ ನಿಲುವನ್ನು ಕಾದುನೋಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.