ಶ್ರೀನಗರ, ನ 12 (Daijiworld News/ MB) : ಜಮ್ಮು ಕಾಶ್ಮೀರದ ಗಂಡರ್ ಬಾಲ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಭದ್ರತಾ ಪಡೆ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್ ಕೌಂಟರ್ ನಡೆದಿದ್ದು, ಇಬ್ಬರು ಉಗ್ರರನ್ನು ಸೇನೆ ಹೊಡೆದುರಿಳಿಸಿದ್ದಾರೆ.
ಉಗ್ರರು ಜಿಲ್ಲೆಯ ಗುಂಡ್ ಪ್ರದೇಶದಲ್ಲಿ ಇರುವ ಮಾಹಿತಿ ದೊರೆತ ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಸಿಆರ್ ಪಿಎಫ್ ಪಡೆ ಕಾರ್ಯಾಚರಣೆ ನಡೆಸಿದ್ದು, ಉಗ್ರರನ್ನು ಸದೆಬಡಿದಿದೆ.
ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಸಿಆರ್ ಪಿಎಫ್ ಪಡೆ ಆ ಸ್ಥಳದಲ್ಲಿ ಇನ್ನೂ 2-3 ಉಗ್ರರು ಇರುವ ಮಾಹಿತ ದೊರೆತಿರುವ ಮೇರೆಗೆ ಕಾರ್ಯಚರಣೆಯನ್ನು ಮುಂದುವರಿಸಿದ್ದಾರೆ.