ಶಿವಮೊಗ್ಗ, ನ 12(Daijiworld News/MSP): ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದಾಗ ಐರನ್ ಬಾಕ್ಸ್ ನ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಂಬಿಬಿಎಸ್ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನ. 12ರ ಸೋಮವಾರ ರಾತ್ರಿ ಪುರಲೆ ಬಡಾವಣೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ದಾವಣಗೆರೆ ಮೂಲದ ನಿತಿನ್ (23) ಎಂದು ಗುರುತಿಸಲಾಗಿದೆ.
ನಿತಿನ್ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.