ನವದೆಹಲಿ , ನ 12 (Daijiworld News/ MB) : ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ದೆಹಲಿಯ ನ್ಯಾಯಾಲಯ ವಾರಂಟ್ ಹೊರಡಿಸಿದೆ.
2018ರ ಅಕ್ಟೋಬರ್ ನಲ್ಲಿ ಶಶಿ ತರೂರ್ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯ ಕುರಿತು ಅವಹೇಳನ ಮಾಡಿದ್ದಾರೆಂದು ಬಿಜೆಪಿ ಮುಖಂಡ ರಾಜೀವ್ ಬಬ್ಬರ್ ಮಾನಹಾನಿ ದೂರು ಸಲ್ಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿ ತರೂರ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ನ್ಯಾಯಾಲಯ ವಾರಂಟ್ ಹೊರಡಿಸಿದೆ.