ನವದೆಹಲಿ, ನ13 (Daijiworld News/ MB): ಅಯೋಧ್ಯೆ ತೀರ್ಪೀನ ಬೆನ್ನಲ್ಲೇ ದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದ ಶಬರಿಮಲೆಯ ಹಾಗೂ ರಾಫೇಲ್ ಮೇಲ್ಮನವಿ ಅರ್ಜಿಗಳ ತೀರ್ಪನ್ನು ನಾಳೆ ಸುಪ್ರೀಂಕೋರ್ಟ್ ನೀಡಲಿದೆ.
ಶಬರಿಮಲೆಯ ಬೆಟ್ಟದ ಮೇಲಿನ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶಿಸುವ ಅವಕಾಶವನ್ನು ಸುಪ್ರೀಂಕೋರ್ಟ್ ತನ್ನ ತೀರ್ಪಿನ ಮೂಲಕ ಒದಗಿಸಿತ್ತು. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಬಗ್ಗೆ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪು ನಾಳೆ ಹೊರಬೀಳಲಿದೆ.
ಮಾತ್ರವಲ್ಲದೇ ಫ್ರೆಂಚ್ ಸಂಸ್ಥೆ ಡಸಾಲ್ಟ್ ಏವಿಯೇಷನ್ನೊಂದಿಗಿನ ರಾಫೆಲ್ ಫೈಟರ್ ಜೆಟ್ ಒಪ್ಪಂದದಲ್ಲಿ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಕಟಿಸಲಿದೆ.