ಬೆಂಗಳೂರು, ನ 13 (DaijiworldNews/SM): ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಎಂದು ಸಚಿವ ಸಿಟಿ ರವಿ ಅವರು ಭರವಸೆ ನೀಡಿದ್ದಾರೆ.
ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಆನಂದ್ರಾವ್ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೆಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದರು. ಹಾಗೂ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಭರವಸೆಯನ್ನು ನೀಡಿದರು.
ಇನ್ನು ಸಚಿವರ ಭರವಸೆಯ ಹಿನ್ನೆಲೆಯಲ್ಲಿ ಕಳೆದ 10 ದಿನಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕರ್ನಾಟಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹಿಂಪಡೆದಿದ್ದಾರೆ.