ಬೆಂಗಳೂರು, ನ.14(Daijiworld News/SS): ಪಕ್ಷ ಸೇರ್ಪಡೆ ಹಾಗೂ ಟಿಕೆಟ್ ಕುರಿತಾಗಿ ಬಿಎಸ್ ಯಡಿಯೂರಪ್ಪ ಅನರ್ಹ ಶಾಸಕರ ಜೊತೆಗೆ ಮಾತುಕತೆ ನಡೆಸಿದ್ದು, ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿದ್ದಾರೆ.
ಅನರ್ಹ ಶಾಸಕರ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ನಡೆ ಕುರಿತಾಗಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಅನರ್ಹ ಶಾಸಕರು ಮಾತುಕತೆ ನಡೆಸಿದ್ದಾರೆ. ತೀರ್ಪು ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಅನರ್ಹ ಶಾಸಕರು ತಕ್ಕ ಮಟ್ಟಿಗೆ ರಿಲ್ಯಾಕ್ಸ್ ಆಗಿದ್ದು ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಬಿಎಸ್ ಯಡಿಯೂರಪ್ಪ ಜೊತೆಗೆ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಅನರ್ಹ ಶಾಸಕರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಅನರ್ಹರಿಗೆ ಚುನಾವಣೆ ಸ್ಪರ್ಧೆ ಮಾಡಲು ಅವಕಾಶ ನೀಡಿದರೂ ಬಿಜೆಪಿಯಲ್ಲಿ ಅನರ್ಹರ ಸ್ಪರ್ಧೆ ಕುರಿತಾಗಿ ಭಿನ್ನಅಭಿಪ್ರಾಯಗಳು ವ್ಯಕ್ತವಾಗಿವೆ. ಹೊಸಕೋಟೆ, ಮಹಾಲಕ್ಷ್ಮಿ ಲೇಔಟ್, ಅಥಣಿಯಲ್ಲಿ ತಲೆಧೋರಿರುವ ಬಂಡಾಯ ಅನರ್ಹರಿಗೆ ತಲೆನೋವಾಗಿದೆ. ಜೊತೆಗೆ ಅನರ್ಹರನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸುವುದಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಸವಾಲಿನ ಕೆಲಸವಾಗಿದೆ.