ನವದೆಹಲಿ, ನ.14(Daijiworld News/SS): ರಫೇಲ್ ತೀರ್ಪಿನ ಮರುಪರಿಶೀಲನೆಗೆ ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಆದೇಶನ್ನು ಸ್ವಾಗತಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೌಕಿದಾರ ಚೋರ್ ಹೈ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆ, ಸುಪ್ರೀಂ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ.
ಚೌಕಿದಾರ್ ಚೋರ್ ಹೈ ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಲ್ಲಿಸಲಾಗಿದ್ದ ನಿಂದನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿ ಅವರು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಹೇಳಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮಾಯಾಚನೆ ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದೆ.
ರಾಹುಲ್ ಗಾಂಧಿಯ ಈ ಹೇಳಿಕೆಯ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ನಿಂದನಾ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಇಂದು ಆದೇಶ ನೀಡಿದ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿತು.