ನವದೆಹಲಿ, ನ.15(Daijiworld News/SS): ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ಮೋದಿ ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ ಬೆನ್ನಲ್ಲೇ, ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿಯಲ್ಲಿ ಯಾವುದೇ ಅರ್ಹ ಅಂಶಗಳು ಕಂಡುಬಾರದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೊಯ್ ನೇತೃತ್ವದಲ್ಲಿನ ತ್ರಿಸದಸ್ಯ ಪೀಠ ವಜಾಗೊಳಿಸಿತ್ತು.
ರಫೇಲ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಬೃಹತ್ ಬಾಗಿಲು ತೆರೆದಿದೆ. ಪ್ರಾಮಾಣಿಕ ರೀತಿಯಲ್ಲಿ ತನಿಖೆ ನಡೆಸಬೇಕಾಗಿದೆ. ಈ ಹಗರದ ತನಿಖೆಗೆ ಜಂಟಿ ಸಂಸದೀಯ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಫೇಲ್ ಡೀಲ್ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ವಿಷುಯವಾಗಿ ಇಂದು ಮರುಪರಿಶೀಲನಾ ಅರ್ಜಿ ನಡೆಸಿದ ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿತ್ತು. ಅಲ್ಲದೆ, ಕಾಂಗ್ರೆಸ್ ಸಂಸದ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ತರಾಟೆ ತೆಗೆದುಕೊಂಡಿತ್ತು.