ನವದೆಹಲಿ, ನ.15(Daijiworld News/SS): ಡಿಕೆಶಿ ಜಾಮೀನು ರದ್ದು ಕೋರಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದ್ದು, ಮಾಜಿ ಸಚಿವ ಡಿಕೆ ಶಿವಕುಮಾರ್ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ.
ದೆಹಲಿ ಹೈಕೋರ್ಟ್ ಆದೇಶವನ್ನು ನ್ಯಾ. ರೋಹಿಂಗ್ಟನ್ ನಾರಿಮನ್ ಪೀಠ ಎತ್ತಿ ಹಿಡಿದಿದೆ. ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ನೀವು ದೇಶದ ನಾಗರಿಕರೊಂದಿಗೆ ವ್ಯವಹರಿಸುವ ವಿಧಾನ ಇದಲ್ಲ ಎಂದು ಹೇಳಿದೆ.
ಇಡಿ ಮೇಲ್ಮನವಿ ಪ್ರಕರಣದಲ್ಲಿ ಡಿಕೆಶಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದ ಸರ್ವೋಚ್ಛ ನ್ಯಾಯಾಲಯ, ನಾವು ಡಿಕೆಶಿಗೆ ಯಾವುದೇ ನೋಟಿಸ್ ನೀಡಿಲ್ಲ. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾ. ರೋಹಿಂಗ್ಟನ್ ನಾರಿಮನ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಸ್ಪಷ್ಟನೆ ನೀಡಿದೆ.