ಬೆಂಗಳೂರು, ನ.15(Daijiworld News/SS): ಬೇರೆ ಪಕ್ಷದ ನಾಯಕರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನಾಯ್ತು ನನ್ನ ಪಕ್ಷವಾಯ್ತು. ನನ್ನ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳ ಬಗ್ಗೆ ಅಷ್ಟೇ ನಾನು ಮಾತನಾಡೋದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
15 ಜನರನ್ನು ಸೋಲಿಸುವುದೇ ನನ್ನ ಗುರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅವರವರ ಅನುಕೂಲಕ್ಕೆ ತಕ್ಕಂತೆ ಅವರು ಮಾತನಾಡುತ್ತಾರೆ. ಆದರೆ ಅವರ ಮಾತಿಗೆ ನನ್ನ ಆಕ್ಷೇಪ ಇಲ್ಲ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಬೇಕು ಎಂದು ಜನರು ತೀರ್ಮಾನ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನಾವು 15 ಕ್ಷೇತ್ರ ಗೆದ್ದೇ ಗೆಲ್ತೀವಿ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಸುವುದು ನನಗೆ ಗೊತ್ತಿತ್ತು ಎಂದ ಮುಖ್ಯಮಂತ್ರಿ ಯಡಿಯೂರಪ್ಪ, ಶರತ್ ಬಚ್ಚೇಗೌಡರ ಸ್ಪರ್ಧೆ ವಿಚಾರ ರಾಜ್ಯಾಧ್ಯಕ್ಷರ ಬಳಿ ಮಾತನಾಡಿದ್ದೇನೆ. ಈ ಬಗ್ಗೆ ಅವರು ಏನು ಕ್ರಮ ಕೈಗೊಳ್ಬೇಕೋ ಕೈಗೊಳ್ಳಲಿದ್ದಾರೆ, ಅವರು ನಾಮಪತ್ರ ಸಲ್ಲಿಕೆ ಮಾಡುವ ವಿಚಾರ ನನಗೆ ತಿಳಿದಿತ್ತು. ನನ್ನ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.