ನವದೆಹಲಿ, ನ.15(Daijiworld News/SS): ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ಮತ್ತೊಮ್ಮೆ ಕ್ಲೀನ್ ಚಿಟ್ ನೀಡಿ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಸುಳ್ಳು ಆರೋಪ ಹೊರಿಸಿದ್ದಾರೆ. ಈ ಹಿನ್ನೆಲೆ ರಾಹುಲ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಭಾರತೀಯ ಜನತಾ ಪಕ್ಷ ತಿಳಿಸಿದೆ.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ನಾಳೆ ದೆಹಲಿಯ ಕಾಂಗ್ರೆಸ್ ಪಕ್ಷದ ಕಚೇರಿಯ ಹೊರಭಾಗದಲ್ಲಿ ಹಾಗೂ ದೇಶದ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿದೆ.