ನವದೆಹಲಿ, ನ. 03 (DaijiworldNews/SM): ಅಕ್ರಮ ಹಣ ಹೊಂದಿದ ಆರೋಪದ ಮೇಲೆ ಇಡಿ ಖೆಡ್ಡಕ್ಕೆ ಸಿಲುಕಿ ಜೈಲು ಪಾಲಾಗಿ ಬಳಿಕ ಬಿಡುಗಡೆಗೊಂಡಿರುವ ಮಾಜಿ ಸಚಿವ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಯಾವುದೇ ಕಾರಣಕ್ಕೂ ಜಾರಿ ನಿರ್ದೇಶನಾಲಯ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ.
ಅಕ್ರಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಡಿ.ಕೆ.ಶಿವಕುಮಾರ್ ಅವರನ್ನು ಸೆ.3 ರಂದು ಇಡಿ ವಿಶೇಷ ನ್ಯಾಯಾಲಯ ಬಂಧಿಸಿತ್ತು. ಇದರ ನಂತರ ಡಿಕೆಶಿ 48 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿ ಸೆರೆವಾಸದಲ್ಲಿದ್ದರು. ಕಳೆದ ಅಕ್ಟೋಬರ್ ಅಂತ್ಯದಲ್ಲಿ ದೆಹಲಿ ಹೈಕೋರ್ಟ್ ಶಿವಕುಮಾರ್ ಗೆ ಜಾಮೀನು ನೀಡಿತ್ತು.