ಬೆಂಗಳೂರು,ನ 17 (Daijiworld News/MB): ಅನರ್ಹ ಶಾಸಕರಿಂದ ತೆರವಾಗಿದ್ದ17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯ ಪ್ರಚಾರಕರ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿರುವಂತೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಈಶ್ವರಪ್ಪ, ಪ್ರತಾಪಸಿಂಹ ಸೇರಿದಂತೆ ಒಟ್ಟು 40 ಪ್ರಮುಖ ನಾಯಕರು ಪ್ರಚಾರಕ ಸ್ಥಾನದಲ್ಲಿದ್ದಾರೆ.
ಇನ್ನೂ ಈ ಪಟ್ಟಿಯಲ್ಲಿ ಮುಖ್ಯಮಂತ್ರಿಯವರ ಪುತ್ರರಾದ ಬಿ.ವೈ.ವಿಜಯೇಂದ್ರ ಮತ್ತು ಸಂಸದ ಬಿ. ವೈ ರಾಘವೇಂದ್ರರವರ ಹೆಸರು ಇಲ್ಲ. ಸಿಎಂ ಬಿಎಸ್ವೈಗಿಂತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.