ಬೆಂಗಳೂರು, ನ.18(Daijiworld News/SS): ಶರತ್ ಬಚ್ಚೇಗೌಡ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದರೆ ನಾವೇ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಹೊಸಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶರತ್ ಬಚ್ಚೇಗೌಡ ಬಿಜೆಪಿ ವಿರುದ್ಧ ಆಕ್ರೋಶಗೊಂಡು ಪಕ್ಷೇತ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಯಡಿಯೂರಪ್ಪ, ಶರತ್ ಬಚ್ಚೇಗೌಡ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದರೆ ನಾವೇ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿ ವಿರುದ್ಧ ಬಂಡಾಯ ಎದ್ದು ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಭರದ ಸಿದ್ಧತೆ ನಡೆಯುತ್ತಿದೆ.