ದಾವಣಗೆರೆ, ನ 18 (DaijiworldNews/SM): ಹಾವೇರಿಯ ಎರಡು ಕ್ಷೇತ್ರಗಳು ಸೇರಿದಂತೆ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ವಿಶ್ವಾಸದಿಂದ ನುಡಿದಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಿಂದ ಉಪಸಮರದಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳು ಹೆಚ್ಚಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತದೆ. ಗೆಲ್ಲುವ ಪಕ್ಷ ಎಂದ ಮೇಲೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿಯೇ ಇರುತ್ತಾರೆ. ಆಡಳಿತದಲ್ಲಿರುವ ನಮ್ಮ ಪಕ್ಷದಲ್ಲಿ ಸಹಜವಾಗಿಯೇ ಆಕಾಂಕ್ಷಿಗಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಟರೇ ನೋಡುಕೊಳ್ಳುತ್ತಾರೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಕೊಲೆ ಯತ್ನ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯೆ ನೀಡಿರುವ ಅವರು, ಹಲ್ಲೆಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದೆ. ತನ್ವೀರ್ ಸೇಠ್ ಅವರ ಆರೋಗ್ಯದಲ್ಲಿ ಚೇತರಿಕೆ ಉಂಟಾಗಿದ್ದು, ಉತ್ತಮ ವಿಚಾರ ಎಂದರು.