ಚಿಕ್ಕಬಳ್ಳಾಪುರ, ನ 19 (DaijiworldNews/SM): ಡಿಸೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರಕಾರ ಪತನಗೊಳ್ಳಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಂದೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ.
ಮುಸ್ಲಿಂರ ವಿರುದ್ಧ ಶಿವ ಸೇನೆ ದಂಗೆ ಎದ್ದುದ್ದು, ಇದರೊಂದಿಗೆ ಕೈ ಜೋಡಿಸಿದ ಕಾಂಗ್ರೆಸ್ ಕೋಮುವಾದಿಗಳೋ ಅಥವಾ ನಾವು ಕೋಮುವಾದಿಗಳೋ ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ನವರು ನಮ್ಮನ್ನು ಕೋಮುವಾದಿಗಳೆಂದು ಹೇಳುತ್ತಾರೆ. ಆದರೆ, ಶಿವಸೇನೆಯೊಂದಿಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿಗೆ ಮುಂದಾಗಿದ್ದು, ಕೋಮುವಾದಿಗಳೊಂದಿಗೆ ಕಾಂಗ್ರೆಸ್ ಸೇರಿಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.