ನವದೆಹಲಿ,ನ.20(Daijiworld News/SS): ನವದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ತೀವ್ರತೆ ದಾಖಲಾಗಿದೆ. ಆದರೆ ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಭಾರತ ಮತ್ತು ನೇಪಾಳ ಗಡಿಯಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ. ಹೊಸದಿಲ್ಲಿ, ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ ನೋಯ್ಡಾ ಸೇರಿದಂತೆ ಹಲವು ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ ಎನ್ನಲಾಗಿದೆ.
ಭೂಕಂಪನದ ಅನುಭವ ಹಲವೆಡೆ ಆಗಿದ್ದರೂ, ಪ್ರಾಥಮಿಕ ವರದಿಗಳ ಪ್ರಕಾರ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.