ನವದೆಹಲಿ, ನ.20(Daijiworld News/SS): ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ.
ಐಎನ್'ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ದೆಹಲಿ ಹೈಕೋರ್ಟ್ ಜಾಮೀನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಬಗ್ಗೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ತ್ರಿಸದಸ್ಯತ್ವ ಪೀಠ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದ್ದು, ಚಿದಂಬರಂ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಪರವಾಗಿ ನ್ಯಾಯಾಲಯಕ್ಕೆ ಹಾಜರಿದ್ದ ಸಾಲಿಸಿಟರ್ ಜನರಲ್ ತುಶಾರ್ ಮೆಹ್ದಾ ಅವರು, ನವೆಂಬರ್ 25ರೊಳಗಾಗಿ ಪ್ರತಿಕ್ರಿಯೆ ನೀಡುವುದಾಗಿ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.