ಮೈಸೂರು, ನ 20 (Daijiworld News/MSP): ಶಾಸಕ ತನ್ವೀರ್ಸೇಠ್ ಮೇಲೆ ರಾಜಕೀಯ ಅಸ್ತಿತ್ವ, ಪೈಪೋಟಿ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದ ಹಲ್ಲೆ ನಡೆಸಿರುವುದು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಬೊಮ್ಮಾಯಿ ಅವರು , ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದರು. ತನ್ವೀರ್ ಸೇಠ್ ಅವರು ಈಗ ಆರೋಗ್ಯವಾಗಿದ್ದು ಆಹಾರ ಸೇವನೆ ಮಾಡಿದ್ದಾರೆ. ಆತಂಕ ಪಡುವ ಅಗತ್ಯ ಇಲ್ಲ ಎಂದರು.
ಶಾಸಕರ ಹತ್ಯೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ. ಆರ್ಎಸ್ಎಸ್ ಮುಖಂಡ ರಾಜು ಮತ್ತು ಇತರೆಡೆ ನಡೆದಿರುವ ಹತ್ಯೆಗಳಿಗೂ ಈ ಹಲ್ಲೆ ಪ್ರಕರಣಕ್ಕೂ ನಂಟಿದೆ. ಇನ್ನೆರಡು ದಿನಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.