ಬೆಂಗಳೂರು, ನ 21 (Daijiworld News/MSP): "ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ"ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉಪಚುನಾವಣೆ ಘೋಷಣೆಯಾಗಿದೆ, ಫಲಿತಾಂಶದ ಬಳಿಕ "ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ಬಡವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ. ರಾಜಕಾರಣ ಜನಸೇವೆಗೆ ಇರುವ ಸಾಧನ ಅಂತ ನಂಬಿದವರು ನಾವು. ಹಣ-ಅಧಿಕಾರದ ಸ್ವಾರ್ಥ ಸಾಧನೆಗಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುವವರಿಗೆ ಜನ ಮತ ನೀಡಬಾರದು" ಎಂದು ಹೇಳಿದ್ದಾರೆ.
ಮುಂದುವರಿಸಿ ಟ್ವೀಟ್ ಮಾಡಿದ ಅವರು, "ವಿಶ್ವನಾಥ್ ಅಂಥವರು ಸಾರ್ವಜನಿಕ ಜೀವನದಲ್ಲಿ ಇರಬಾರದು. ಯಾವ ಪಕ್ಷದವರನ್ನು ಇಂಥವರು ನೆಮ್ಮದಿಯಾಗಿ ಇರಲು ಬಿಡಲ್ಲ. ನಾನು ಮುಖ್ಯಮಂತ್ರಿ ಆದಾಗಲೂ ನೆಮ್ಮದಿಯಾಗಿ ಇರಲು ಬಿಡಲಿಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ ಎಂದು ಪತ್ರ ಬರೆದಿದ್ದರು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಹೆಚ್.ವಿಶ್ವನಾಥ್ ವಿರುದ್ದ ಕಿಡಿಕಾರಿದ್ದಾರೆ.