ಬೆಂಗಳೂರು, ನ.21(Daijiworld News/SS): ಬಿಜೆಪಿ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಮೇಲೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಗೆಲ್ಲಿಸಿದರೆ 24 ಗಂಟೆಯಲ್ಲಿ ಮಂತ್ರಿ ಆಗುತ್ತಾರೆ. ಹೋಸಕೋಟೆಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದೀನಿ ಎಂದು ಸಿಎಂ ಮತದಾರರಲ್ಲಿ ಪ್ರಭಾವ ಬೀರಿದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.
ಕಾಂಗ್ರೆಸ್ ಮುಖಂಡ ಹೇಮಂತ್ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು, ಇದೇ ನವೆಂಬರ್ 18ರಂದು ಎಂಟಿಬಿ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯಿಂದ 60 ಮೀಟರ್ ದೂರದಲ್ಲೇ ಅನುಮತಿ ಪಡೆಯದೇ ಬೃಹತ್ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಉಪ ಚುನಾವಣೆ ಡಿಸೆಂಬರ್ 5ರಂದು 15 ಕ್ಷೇತ್ರಹಳಿಗೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.