ನವದೆಹಲಿ, ನ 21 (Daijiworld News/MSP): ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ 21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿಗೆ ಆಯ್ಕೆ ಆಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿಕಾರಿದೆ.
ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಗಾಂಧಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯ ಅಂಧಾಭಿಮಾನಿಯಾಗಿರುವ ಪ್ರಗ್ಯಾ ಠಾಕೂರ್ ರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಬಿಜೆಪಿ ಆಯ್ಕೆ ಮಾಡಿದ್ದು, ಇದು ಪ್ರತಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
2019ರ ಸಂಸತ್ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ಞಾ ಠಾಕೂರ್ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸಿದ್ದರು. ಮಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಜ್ಞಾ ಅವರು 2017ರ ಏಪ್ರಿಲ್ ತಿಂಗಳಿನಲ್ಲಿ ಮುಂಬೈ ಹೈಕೋರ್ಟ್'ನಿಂದ ಜಾಮೀನು ಪಡೆದುಕೊಂಡಿದ್ದರು.