ಮುಂಬೈ, ನ.22(Daijiworld News/SS): ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಎಂ ಆಗುವುದನ್ನು ಮಹಾರಾಷ್ಟ್ರದ ಜನತೆ ಬಯಸುತ್ತಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರ ದೇವನ ಸಿಂಹಾಸನ ನೀಡಿದರೂ ಸಹ ಶಿವಸೇನೆ ಬಿಜೆಪಿ ಜೊತೆ ಇನ್ನು ಮೈತ್ರಿ ಬೆಳೆಸುವುದಿಲ್ಲ. ಎನ್ ಸಿಪಿ-ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದರೆ ಶಿವಸೇನೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಪಟ್ಟ ದೊರಕಲಿದೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಶಿವಸೇನೆಗೆ ಸಿಎಂ ಹುದ್ದೆ ನೀಡಲು ಒಪ್ಪಿದೆಯಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯ ಹುದ್ದೆ ನೀಡುವ ಅವಕಾಶದ ಸಮಯ ಮುಗಿದಿದೆ. ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಎಂ ಆಗುವುದನ್ನು ಮಹಾರಾಷ್ಟ್ರದ ಜನತೆ ಬಯಸುತ್ತಾರೆ ಎಂದು ಹೇಳಿದ್ದಾರೆ.
ರಾಜ್ಯಪಾಲರನ್ನು ಮೂರೂ ಪಕ್ಷಗಳು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸುತ್ತೀರಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವಾಗ ಗವರ್ನರ್ ಅವರನ್ನು ಏಕೆ ಭೇಟಿ ಮಾಡಬೇಕು ಎಂದರು.