ಕಲಬುರಗಿ, ನ.22(Daijiworld News/SS): ಉಪಚುನಾವಣೆಯಲ್ಲಿ ಜನರ ತೀರ್ಮಾನ ಬಿಜೆಪಿ ಪರವಾಗಿ ಇರುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರನ್ನು ಸೋಲಿಸುವುದು ಗೆಲ್ಲಿಸುವುದು ಕಾಂಗ್ರೆಸ್-ಜೆಡಿಎಸ್ ಕೈಯಲ್ಲಿಲ್ಲ. ಅವರ ಸೋಲು- ಗೆಲುವನ್ನು ಜನರು ನಿರ್ಧರಿಸುತ್ತಾರೆ. ಜನರ ತೀರ್ಮಾನ ಬಿಜೆಪಿ ಪರವಾಗಿ ಇರುತ್ತದೆ. ಕೆಲ ಕ್ಷೇತ್ರಗಳಲ್ಲಿ ಬಂಡಾಯ ಇದೆ. ಬಂಡಾಯ ಎಲ್ಲ ಪಕ್ಷಗಳು ಇದ್ದೇ ಇರುತ್ತದೆ. ಆದರೆ ಅದು ಕ್ಷಣಿಕ ಮಾತ್ರ. ಅದರಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.
ಎಲ್ಲರೂ ಸೇರಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ಆದರೆ ಕುಮಾರಸ್ವಾಮಿ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರ ಬಗ್ಗೆ ಅವರನ್ನೇ ಕೇಳಬೇಕು ಎಂದು ಹೇಳಿದರು.