ಉತ್ತರ ಪ್ರದೇಶ, ನ 22 (Daijiworld News/MSP): 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಸೀಮೆಎಣ್ಣೆ ಸುರಿದು ಆಕೆಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
"ಸಂತ್ರಸ್ತೆ ಬಾಲಕಿ ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಹೈಯರ್ ಸೆಕೆಂಡರಿ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
"ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲಾಗಿದೆ ಎಂದು ಆಕೆಯ ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ದಂಡ ಸಂಹಿತೆ 376, 307 ಮತ್ತು ಇತರ ವಿಭಾಗಗಳಡಿ ಕೇಸು ದಾಖಲಾಗಿದೆ" ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಕುಮಾರ್ ಜೈಸ್ವಾಲ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.