ಬೆಂಗಳೂರು, ನ.23(Daijiworld News/SS): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಕಾರಣ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಪಿ. ಮುರಳೀಧರರಾವ್ ಆರೋಪಿಸಿದ್ದಾರೆ.
ಶ್ರೀ ಸಿದ್ದರಾಮಯ್ಯ ಅವರೇ ಅಧಿಕಾರ ಕಳೆದುಕೊಂಡ ಮೇಲೂ ನೀವು ಸುಳ್ಳು ಹೇಳುವುದನ್ನು ನಿಲ್ಲಿಸಿಲ್ಲ. ಕಾಂಗ್ರೆಸ್ ಪಕ್ಷದ ಕರ್ನಾಟಕದ ಸ್ಥಿತಿಗೆ ಜವಾಬ್ದಾರಿ ಬಿಜೆಪಿಯಲ್ಲ. ಅದು ನೀವು ಮತ್ತು ನಿಮ್ಮ ಹೈಕಮಾಂಡ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸ್ಥಿರ ಸರ್ಕಾರವನ್ನು ನೀಡಲಿದೆ. ಅಭಿವೃದ್ಧಿ ಮತ್ತು ಕಲ್ಯಾಣವನ್ನು ಒಟ್ಟಿಗೆ ನೀಡಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಿಜೆಪಿಯಿಂದ ಪತನವಾಗಿಲ್ಲ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ರಿಂದ ಪತನಗೊಂಡಿತು. ಇದಕ್ಕಾಗಿ ಬಿಜೆಪಿಯತ್ತ ಬೊಟ್ಟು ಮಾಡಬೇಡಿ. 15 ಕ್ಷೇತ್ರದ ಉಪ ಚುನಾವಣೆಯಲ್ಲಿ 12 ಕಾಂಗ್ರೆಸ್ನಿಂದಲೇ ಆಗುತ್ತಿದೆ. ಚುನಾವಣಾ ಫಲಿತಾಂಶ ಕಾಂಗ್ರೆಸ್ ಎಲ್ಲಿದೆ ಎಂಬುದನ್ನು ತೋರಿಸಲಿದೆ ಎಂದಿದ್ದಾರೆ.