ಬೆಂಗಳೂರು, ನ.23(Daijiworld News/SS): ಸಿಬಿಐ ಅಧಿಕಾರಿ ಎಂದು ಹೇಳಿ ಜನರಿಗೆ ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ನಕಲಿ ಸಿಬಿಐ ಅಧಿಕಾರಿ ಅಭಿಲಾಶ್ (34) ಬಂಧಿತ ಆರೋಪಿ.
ಅಭಿಲಾಶ್'ನನ್ನು ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲ, ಆತನಿಂದ 24 ಲಕ್ಷ ರೂ ಹಣ ವಶಪಡಿಸಿಕೊಂಡಿದ್ದಾರೆ. ಆರೋಪಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿ ಸಾರ್ವಜನಿಕರಿಗೆ ವಂಚಿಸಿ, ಹಣ ಗಳಿಸುತ್ತಿದ್ದ ಎಂದು ತಿಳಿದು ಬಂದಿದೆ. ಈತ ಸುಳ್ಳು ಕೇಸು ದಾಖಲಿಸುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ.