ಬೆಂಗಳೂರು, ನ.23(Daijiworld News/SS): ಮಹಾರಾಷ್ಟ್ರದಲ್ಲಿ ಎನ್'ಸಿಪಿ ಜೊತೆ ಬಿಜೆಪಿ ಸರ್ಕಾರ ರಚನೆ ಮಾಡಿದ್ದಾರೆ. ನಮಗೆ ಸಿದ್ಧಾಂತ ಇಲ್ಲ ಎಂದು ಬಿಜೆಪಿಯವರು ಟೀಕೆ ಮಾಡ್ತಾರೆ. ಬಿಜೆಪಿಯವರು ಮಹಾರಾಷ್ಟ್ರದಲ್ಲಿ ಮಾಡಿದ್ದಾದ್ರೂ ಏನು..? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
ಮಹಾರಾಷ್ಟ್ರದ ಬಿಜೆಪಿ-ಎನ್ಸಿಪಿ ಸರ್ಕಾರ ರಚನೆ ವಿಚಾರವಾಗಿ ಮಾತನಾಡಿದ ಅವರು, ರಾಜಕಾರಣದಲ್ಲಿ ಇವತ್ತು ನೈತಿಕತೆ ಉಳಿದುಕೊಂಡಿಲ್ಲ. ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಬಿಜೆಪಿಯ ವಿರುದ್ಧವೇ ಹೋರಾಟ ಮಾಡಿಕೊಂಡು ಬಂದವರು. ಈಗ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಇಂದು ಸಿದ್ದಾಂತಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಜೊತೆ ಸೇರಿಕೊಂಡಿದ್ದರು. ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದರು. ಬಿಜೆಪಿಯವರು ಎನ್ಸಿಪಿಯ ಭ್ರಷ್ಟಾಚಾರ ಬಯಲು ಮಾಡುತ್ತೇನೆ ಎಂದು ಹೇಳುತ್ತಿದ್ದರು.