ಶ್ರೀನಗರ, ನ.23(Daijiworld News/SS): ಎಲ್ಒಸಿ ಉದ್ದಕ್ಕೂ ಫಾರ್ವರ್ಡ್ ಪೋಸ್ಟ್ಗಳು ಮತ್ತು ಹಳ್ಳಿಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ.
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದೆ. ಸುಂದರ್ಬಾನಿ ವಲಯದಲ್ಲಿ ಶಸ್ತ್ರಾಸ್ತ್ರ ಮತ್ತು ಶೆಲ್ ದಾಳಿ ಮಾಡಲು ಪಾಕ್ ಆರಂಭಿಸಿದ್ದು, ಇದಕ್ಕೆ ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡಿದೆ. ಆದರೆ ಈ ವೇಳೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆಯೂ ಪಾಕಿಸ್ತಾನವು ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಇದಿಗ ಮತ್ತೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ.