ಕಾರವಾರ, ನ 24(DaijiworldNews/SM): ಸೋಲಿನ ಭೀತಿಯಿಂದ ಹೆದರಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಯಲ್ಲಾಪುರ- ಮುಂಡಗೋಡ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಪರ ಮತಯಾಚನೆ ನಡೆಸಿದರು. ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯಗೆ ಸೋಲಿನ ಭೀತಿ ಎದುರಾಗಿದೆ. ಇದೇ ಕಾರಣದಿಂದ ಅನರ್ಹ ಶಾಸಕರಿಗೆ 25 ಕೋಟಿ ನೀಡಿದ್ದೇವೆ ಎಂದು ಆರೋಪಿಸುತ್ತಿದ್ದಾರೆ. ಹತಾಶೆಯಿಂದ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಸಾಧ್ಯವಿದ್ದರೆ ನಾವು ಹಣ ನೀಡಿದ್ದೇವೆ ಎಂಬುವುದನ್ನು ಸಾಕ್ಷಿ ಸಹಿತ ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ.
"ರಾಜ್ಯದ ಉಪಚುನಾವಣೆಯ ಅಷ್ಟೂ ಕ್ಷೇತ್ರವನ್ನು ಗೆಲ್ಲುವ ಮೂಲಕ ಮುಂದಿನ ಮೂರೂವರೆ ವರ್ಷ ಆಡಳಿತ ನಡೆಸಲಿದ್ದೇವೆ. ರಾಜ್ಯಕ್ಕೆ ಹೊಸ ಬಜೆಟ್ ಅನ್ನು ನೀಡಲಿದ್ದು, ಹೆಚ್ಚಿನ ಅನುದಾನಗಳನ್ನು ಬಿಡುಗಡೆ ಮಾಡಲಿದ್ದೇನೆ ಎಂದಿದ್ದಾರೆ.