ಮೈಸೂರು, ನ.25(Daijiworld News/SS): ನಿಮ್ಮೆಲ್ಲರ ಆಶೀರ್ವಾದದಿಂದ ರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತು. ಆದರೆ, ಅದು ಆಗಲಿಲ್ಲವಲ್ಲ ಎಂಬ ನೋವು ಅನೇಕ ಕಡೆ ಇದೆ. ರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಲಿಲ್ಲ ಅಂತ ಒಬ್ಬ ವೃದ್ಧರು ಹೇಳುತ್ತಿದ್ದರು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಪ ಮುಖ್ಯಮಂತ್ರಿಯಾಗಲಿಲ್ಲ ಎಂಬ ನೋವು ಜನರಲ್ಲಿ ಇದೆ. ತಾವು ಉಪ ಮುಖ್ಯಮಂತ್ರಿಯಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅವರು, ಹುಣಸೂರಿನಲ್ಲಿ ವಿಶ್ವನಾಥ್ ಅವರು ಅಭ್ಯರ್ಥಿ ಅಲ್ಲ. ನಾನೇ ಅಭ್ಯರ್ಥಿ ಎಂದು ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ಈ ಬಾರಿ ಎಚ್.ವಿಶ್ವನಾಥ್ ಚುನಾವಣೆಯಲ್ಲಿ ಗೆದ್ದ 24 ಗಂಟೆಯಲ್ಲೆ ಮಂತ್ರಿಯಾಗುತ್ತಾರೆ. ನಿಮಗೆ ಶಾಸಕರು ಬೇಕೋ, ಮಂತ್ರಿ ಬೇಕೋ ನೀವೇ ತೀರ್ಮಾನ ಮಾಡಿ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಹದಿನೈದು ಕ್ಷೇತ್ರಗಳ ಉಪ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿರುಸಿನ ಪ್ರಚಾರ ಕೂಡ ನಡೆಯುತ್ತಿದೆ.