ಬೆಂಗಳೂರು, ನ 25 (DaijiworldNews/SM): ಈಗಾಗಲೇ ಸಿದ್ದರಾಮಯ್ಯನವರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡಹೇರಿದ್ದಾರೆ. ಹಾಗೂ ಹೈಕಮಾಂಡನ್ನು ಬ್ಲ್ಯಾಕ್ ಮೇಲ್ ಮಾಡಿಕೊಂಡು ಪ್ರತಿಪಕ್ಷ ನಾಯಕರಾಗಿದ್ದಾರೆ. ಒಂದೊಮ್ಮೆ ರಹಸ್ಯ ಮತದಾನ ನಡೆದಿದ್ದರೆ, ಶಾಸಕರು ಅವರಿಗೆ ಮತಹಾಕುವುದಿಲ್ಲ ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಶಾಸಕರೇ ಸಿದ್ದರಾಮಯ್ಯ ಅವರನ್ನು ನಾಯಕರೆಂದು ಒಪ್ಪಿಕೊಳ್ಳಲು ಸಿದ್ದರಿಲ್ಲ. ಅದೇ ಕಾರಣ ವರು ಏಕಾಂಗಿಯಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದರು. ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದ ಅವರು ಕಾಂಗ್ರೆಸ್ನ ಪತನಕ್ಕೂ ಕಾರಣರಾಗಲಿದ್ದಾರೆ ಎಂದು ಹೇಳಿದರು.
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಹಾಗಾಗಿ ಮೂರನೇ ಸ್ಥಾನದಲ್ಲಿದ್ದ ಜೆಡಿಎಸ್ ಮೂರನೇ ಬಾರಿಗೆ ಸರ್ಕಾರ ರಚಿಸಿತು. ಮೂರನೇ ಬಾರಿಯೂ ಆಡಳಿತ ನಡೆಸುವಲ್ಲಿ ಜೆಡಿಎಸ್ ವಿಫಲವಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ.