ನವದೆಹಲಿ, ನ 26 (Daijiworld News/MSP): ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ರಚನೆಯ ಸಿಂಧುತ್ವ ಪ್ರಶ್ನಿಸಿ, ಹಾಗೂ ತ್ವರಿತವಾಗಿ ಬಹುಮತ ಪರೀಕ್ಷೆ ನಡೆಸಲು ಸೂಚನೆ ಕೊಡಬೇಕು ಎಂದು ಕೋರಿ ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಾದ, ಪ್ರತಿವಾದ ಆಲಿಸಿದ ಸುಪ್ರಿಂ ಕೋರ್ಟ್ , " ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನ.27 ರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಸೋಮವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಾದ, ಪ್ರತಿವಾದ ಅಲಿಸಿದ ಬಳಿಕ ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರದ ತೀರ್ಪು ಓದಿದ ನ್ಯಾ.ಎನ್.ವಿ.ರಮಣ ಅವರು, ತಕ್ಷಣವೇ ಹಂಗಾಮಿ ಸ್ಪೀಕರ್ ನೇಮಿಸಿ , ವಿಶ್ವಾಸಮತ ಸಾಬೀತು ಮಾಡುವ ದೃಶ್ಯಗಳನ್ನು ಚಿತ್ರೀಕರಿಸಬೇಕು ಎಂದು ಆದೇಶಿದರು.