ಮುಂಬೈ, ನ 26 (Daijiworld News/MB) : ಮಹಾರಾಷ್ಟ್ರ ಸರಕಾರ ಸಂಬಂಧಿಸಿ ನಾಳೆ ಬಹುಮತ ಸಾಬೀತು ಮಾಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ಬಹುಮತ ಸಾಬೀತಿಗೆ ಮುನ್ನವೇ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ದೇವೇಂದ್ರ ಫಡ್ನವಿಸ್ ಬಹುಮತ ಸಾಬೀತಿಗೆ ಸಂಬಂಧಪಟ್ಟಂತೆ ಇಂದು ಅಪರಾಹ್ನ 3.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ.
ಅದರ ಬೆನ್ನಲ್ಲೇ ಶಿವಸೇನೆಯ ಮುಖಂಡ ಸಂಜಯ್ ರಾವತ್ "ಅಜಿತ್ ದಾದಾ ನಮ್ಮೊಂದಿಗಿದ್ದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ೫ ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ" ಎಂದು ಹೇಳಿದ್ದಾರೆ.
ನಿನ್ನೆ ತಡರಾತ್ರಿ ಅಜಿತ್ ಪವಾರ್, ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.