ಶ್ರೀನಗರ, ನ.27(Daijiworld News/SS): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಶ್ರೀನಗರ ಜಿಲ್ಲೆಯಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ವಾಗೂರದ ಸರ್ಕಾರಿ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಗ್ರೆನೇಡ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಶ್ರೀನಗರದ ಮಾರುಕಟ್ಚೆ ಪ್ರದೇಶದ ಸರ್ ಸೈಯದ್ ಗೇಟ್ ಬಳಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ್ಕೆ ಗ್ರೆನೇಡ್ ಕಾರಣ ಅಲ್ಲ. ಇದು ಕಡಿಮೆ ತೀವ್ರತೆಯ ಬಾಂಬ್ ಸ್ಫೋಟ ಎಂದು ತಿಳಿದು ಬಂದಿತ್ತು.
ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.