ಮುಂಬೈ, ನ.27(Daijiworld News/SS): ನೆರೆ ರಾಷ್ಟ್ರ ಪಾಕಿಸ್ತಾನವು ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸದಿದ್ದರೆ ಹಣಕಾಸು ಕ್ರಿಯಾ ಕಾರ್ಯಪಡೆಯಿಂದ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರುವುದು ಖಂಡಿತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎಫ್ಎಟಿಎಫ್ ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನವನ್ನು ಬೂದುಪಟ್ಟಿಗೆ ಸೇರಿಸಿದ್ದು, ಇನ್ನು ಮುಂದೆ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸದಿದ್ದರೆ ಕಪ್ಪು ಪಟ್ಟಿಗೆ ಸೇರಿಸುವುದು ಖಂಡಿತ ಎಂದರು.
ಭಾರತದ ಮೇಲೆ ಇನ್ನು ಮುಂದೆ ಸುಲಭವಾಗಿ ಗುರಿಯಾಗಿಟ್ಟುಕೊಂಡು ದಾಳಿ ಮಾಡಲು ಸಾಧ್ಯವಿಲ್ಲ. ಕಳೆದ ಐದೂವರೆ ವರ್ಷಗಳ ಆಡಳಿತದಲ್ಲಿ ನಮ್ಮ ಸರ್ಕಾರ ಭಾರತದಲ್ಲಿರುವ ಎಲ್ಲಾ ಉಗ್ರರ ಮೂಲಭೂತ ಸೌಕರ್ಯಗಳನ್ನು ನಾಶಪಡಿಸಿದ್ದು, ಇನ್ನು ಮುಂದೆ ಎಫ್ಎಟಿಎಫ್ ನೆರವಿನೊಂದಿಗೆ ಎಲ್ಲಾ ಭಯೋತ್ಪಾದಕ ಹಣಕಾಸು ಸಂಪರ್ಕ ಜಾಲವನ್ನು ನಾಶಪಡಿಸಲು ಮುಂದಾಗಿದ್ದೇವೆ ಎಂದು ಹೇಳಿದರು.
ಆರ್ಥಿಕ ಹಿಂಜರಿತ ಮತ್ತು ಹಣದುಬ್ಬರದಿಂದ ಬಳಲುತ್ತಿರುವ ಪಾಕಿಸ್ತಾನ ಭಯೋತ್ಪಾದನೆ ವಿಷಯದಲ್ಲಿ ಕಪ್ಪುಪಟ್ಟಿಗೆ ಸೇರುವುದೊಂದು ಬಾಕಿಯಿದೆಯಷ್ಟೆ ಎಂದು ತಿಳಿಸಿದರು.