ಮುಂಬೈ, ನ.27(Daijiworld News/SS): ಮಹಾರಾಷ್ಟ್ರದ 14ನೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನೂತನ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.
ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇಂದು ಬೆಳಗ್ಗೆ ವಿಧಾನಸಭೆಗೆ ಆಗಮಿಸಿದ ಎಲ್ಲಾ 288 ಶಾಸಕರು ಪ್ರಮಾಣವಚನ ಸ್ವೀಕರಿಸಿದರು.
ಉಸ್ತುವಾರಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್, ಪೃಥ್ವಿರಾಜ್ ಚೌವಾಣ್ ಪ್ರಮಾಣವಚನ ತೆಗೆದುಕೊಂಡವರಲ್ಲಿ ಪ್ರಮುಖರಾಗಿದ್ದಾರೆ. ಅಜಿತ್ ಪವಾರ್ ಅವರು ಪ್ರಮಾಣವಚನ ಸ್ವೀಕರಿಸಲು ಹೋದಾಗ ಎನ್'ಸಿಪಿ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು. ಈ ವೇಳೆ ನೂತನ ಶಾಸಕ ಆದಿತ್ಯ ಠಾಕ್ರೆಗೆ ಸಹ ಸದನದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಶಿವಸೇನೆ, ಎನ್'ಸಿಪಿ ಮತ್ತು ಕಾಂಗ್ರೆಸ್'ನ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಸರ್ಕಾರ ರಚಿಸುತ್ತಿದ್ದು, ನ.28ರಂದು ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.