ಬೆಂಗಳೂರು, ನ.28(Daijiworld News/SS): ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಉಪ ಚುನಾವಣಾ ಕಣಕ್ಕೆ ಇಳಿದಿದ್ದು, ಪ್ರಚಾರವನ್ನು ಮಾಡುತ್ತಿದ್ದಾರೆ. ತಾವು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದ್ದರಿಂದ, ಪಕ್ಷ ಸ್ಪಷ್ಟನೆಯನ್ನು ನೀಡಿದೆ.
ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಪಕ್ಷದ ಬೆಂಬಲಿತ ಅಭ್ಯರ್ಥಿಯಲ್ಲ, ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ ಎಂದು ಹೇಳಿದೆ. ಡಿಸೆಂಬರ್ 5ರಂದು ಅಥಣಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮಹೇಶ್ ಕುಮಟಳ್ಳಿ, ಕಾಂಗ್ರೆಸ್ನಿಂದ ಜಿ. ಬಿ. ಮಂಗ್ಸೂಳಿ ಕಣದಲ್ಲಿದ್ದಾರೆ. ಜೆಡಿಎಸ್ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ ಎಮದು ಸ್ಪಷ್ಟ ಪಡಿಸಿದೆ.
ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ರಾಜಕೀಯ ಲಾಭ ಪಡೆಯಲು ನಮ್ಮ ಪಕ್ಷದ ನಾಯಕರ ಭಾವಚಿತ್ರ ಬಳಸಿಕೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ ಎಂದು ವೆಂಕಟರಾವ್ ನಾಡಗೌಟ ಹೇಳಿದ್ದಾರೆ.