ಬೆಂಗಳೂರು, ನ.28(Daijiworld News/SS): ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ದೊಡ್ಡ ಅಕ್ರಮ ಎಸಗಿದ್ದಾರೆ. ಜಾತಿ ಆಧಾರದಲ್ಲಿ ಸಿಎಂ ಮತ ಕೇಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಮತದಾರರಿಗೆ ಉಂಗುರ, ಸೀರೆ, ಹಣ ಹಂಚುತ್ತಿದ್ದಾರೆ ಎಂದು ಪ್ರಕಾಶ್ ರಾಠೋಡ್ ಆರೋಪಿಸಿದ್ದಾರೆ.
ಚುನಾವಣಾ ಅಯೋಗ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸರ್ಕಾರಕ್ಕೆ ನಿರ್ಧಿಷ್ಟ ನಿರ್ದೇಶನ ನೀಡಬೇಕು ಎನ್ನುವ ಉದ್ದೇಶದಿಂದ ರಾಜ್ಯಪಾಲರ ಕಚೇರಿಗೆ ದೂರು ನೀಡಿದ್ದೇವೆ. ಜೊತೆಗೆ ಚುನಾವಣಾ ಆಯೋಗದ ವಿರುದ್ಧವೂ ದೂರು ನೀಡಿದ್ದೇವೆ ಎಂದು ಹೇಳಿದರು.