ಮುಂಬೈ, ನ 28 (DaijiworldNews/SM): ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಇದೀಗ ಮಹಾರಾಷ್ಟ್ರದ ರಾಜಕೀಯಾಟಕ್ಕೆ ತೆರೆಬಿದ್ದಿದ್ದು, ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ, ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯಾಗಿದೆ. ಹಾಗೂ ಶಿವಸೇಮೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಛತ್ರಪತಿ ಶಿವಾಜಿ ಮಹಾರಾಜ್ ಅವರ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಉದ್ಧವ್ ಠಾಕ್ರೆ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಿದ ಬಳಿಕ ನೂತನ ಸಚಿವರುಗಳಿಗೂ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಏಕನಾಥ ಶಿಂಧೆ, ಸುಭಾಷ್ ದೇಸಾಯ್, ಜಯಂತ್ ಪಾಟೀಲ್, ನಿತಿನ್ ರಾವತ್, ಛಗನ್ ಚಂದ್ರಕಾಂತ್, ಭುಜಬಲ್ ಹಾಗೂ ಸುಭಾಷ್ ರಾಜರಾಮ್ ದೇಸಾಯಿ ಅವರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.